* ಭಾರತದಲ್ಲಿ ಪ್ರತಿ ವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ದೈನಂದಿನ ಬದುಕಿನಲ್ಲಿ ತಂತ್ರಜ್ಞಾನದ ಮಹತ್ವ ಸಾರುವ ನಿಟ್ಟಿನಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಈ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. * 2025ರ ರಾಷ್ಟ್ರೀಯ ತಂತ್ರಜ್ಞಾನ ದಿನದ ಥೀಮ್ : "ಹೊಸತನದ ಮೂಲಕ ಸುಸ್ಥಿರ ನಾಳೆಯನ್ನು ಸಬಲೀಕರಣ ಗೊಳಿಸುವುದು". * 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನ. ಅಂದು ಭಾರತವು ರಾಜಸ್ಥಾನದ ಪೊಖ್ರಾನ್ನಲ್ಲಿ ಸರಣಿ ಅಣುಬಾಂಬ್ ಸ್ಫೋಟದ ಪರೀಕ್ಷೆಗಳನ್ನು ಯಸಸ್ವಿಯಾಗಿ ನಡೆಸಿತು. ಅಷ್ಟೇ ಅಲ್ಲದೆ ಅದೇ ದಿನ ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ 'ಹನ್ಸಾ-3' ಹೆಲಿಕಾಪ್ಟರಿನ ಯಶಸ್ವಿ ಹಾರಾಟ ನಡೆಸಿತು ಹಾಗೂ ಅದೇ ದಿನ ಸಂಪೂರ್ಣ ಸ್ವದೇಶಿ ನಿರ್ಮಿತ ತ್ರಿಶೂಲ್ ಕ್ಷಿಪಣಿಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಎಲ್ಲ ತಾಂತ್ರಿಕ ಸಾಧನೆಗಳ ಹಿನ್ನೆಲೆಯಲ್ಲಿ 1998 ಮೇ 11ರಿಂದ ರಾಷ್ಟ್ರೀಯ ತಂತ್ರಜ್ಞಾನ ದಿನವಾಗಿ ಆಚರಿಸಲಾಗುತ್ತಿದೆ.* ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1998 ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಘೋಷಿಸಿದರು.