* ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ 'ಪ್ರಚಂಡ' ಅವರು ಮೇ 31 ರಿಂದ ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕಠ್ಮಂಡುವಿನಲ್ಲಿ ವಿದೇಶಾಂಗ ಸಚಿವಾಲಯದ ಮೂಲಕ ತಿಳಿದಿದೆ.*  ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೂರನೇ ಬಾರಿಗೆ ನೇಪಾಳ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಪ್ರಚಂಡ ಅವರ ಮೊದಲ ವಿದೇಶಿ ಭೇಟಿ ಇದಾಗಿದೆ.* ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರ ಭಾರತ ಭೇಟಿಯ ಕುರಿತು ವಿದೇಶಾಂಗ ಸಚಿವಾಲಯ ಶನಿವಾರ ಅಧಿಕೃತ ಘೋಷಣೆ ಮಾಡಲಿದೆ.* ಈ ಭೇಟಿಯು ಮೇ 31 ರಿಂದ ಜೂನ್ 3 ರವರೆಗೆ ನಡೆಯಲಿದೆ ಮತ್ತು ಅವರು ದ್ವಿಪಕ್ಷೀಯ ಸಂಬಂಧಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಉನ್ನತ ಮಟ್ಟದ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವ ಎನ್‌ಪಿ ಸೌದ್ ಅವರ ಸಹಾಯಕ ಅಧಿಕಾರಿ ತಿಳಿಸಿದ್ದಾರೆ.