Job Description: * ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮತದಾನ ಮೇ10 ರಂದು ನಡೆಯಲಿದ್ದು, ಮತ ಎಣಿಕೆ ಮೇ.13 ರಂದು ನಡೆಯಲಿದೆ.* ಮುಖ್ಯ ಚುನಾವಣೆ ಆಯುಕ್ತ ರಾಜೀವ ಕುಮಾರ ಮತದಾನ ಮತ್ತು ಚುನಾವಣೆಯ ಇತರ ಪ್ರಕ್ರಿಯೆಗಳ ದಿನಾಂಕವನ್ನು ಪ್ರಕಟಿಸಿದರು.ಚುನಾವಣೆ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ.ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ. ನಾಮಪತ್ರ ಸಲ್ಲಿಕೆ ಏಪ್ರಿಲ್ ರಿಂದ ಆರಂಭವಾಗಲಿದೆ. ಮೇ 24ಕಕ್ಕೆ 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ.* ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ. ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗುವುದು. ಇದೇ ಮೊದಲ ಬಾರಿ ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು.