* ಮೈಸೂರಿನ ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್ ವಿಜಯ್ ಶಂಕರ್ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇಲೆ ನೇಮಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.* 1998 ಹಾಗೂ 2004ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. 2010ರಿಂದ 16ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು, 2010ರಲ್ಲಿ ಕರ್ನಾಟಕ ಮಂತ್ರಿಮಂಡಲದಲ್ಲಿ ವಿಜಯ ಶಂಕರ್ ಸಚಿವರಾಗಿದ್ದರು.* ವಿಜಯ್ ಶಂಕರ್ ಅವರು 2004 ಲೋಕಸಭಾ ಚುನಾವಣೆಯಲ್ಲಿ ಮೈಸೂರಿನಿಂದ ಆಯ್ಕೆಯಾಗಿ 14ನೇ ಲೋಕಸಭೆಗೆ ಪ್ರವೇಶಿಸಿದ್ದರು. ಇದಕ್ಕೂ ಮುನ್ನ 1994ರಲ್ಲಿ ಹುಣಸೂರಿನಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿದ್ದರು, ಅಲ್ಲದೇ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.* ತೆಲಂಗಾಣ, ಜಾರ್ಖಂಡ್, ಮೇಘಾಲಯ ಸೇರಿದಂತೆ ಒಟ್ಟು 10 ರಾಜ್ಯಗಳಿಗೆ ರಾಜ್ಯಪಾಲರ ನೇಮಕವಾಗಿದೆ. ತೆಲಂಗಾಣ ಹಾಗೂ ಜಾರ್ಖಂಡ್ನ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ನೇಮಿಸಲಾಗಿದೆ. ಹರಿಬಾವ್ ಕಿಶನ್ ಬಾವ್ ಬಾಗಡೆ ಅವರನ್ನು ರಾಜಸ್ಥಾನಕ್ಕೆ , ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಜಾರ್ಖಂಡ್ಗೆ ನೇಮಿಸಲಾಗಿದೆ. * ರಾಮನ್ ಡೇಕಾ ಅವರನ್ನು ಛತ್ತೀಸ್ಗಢ ರಾಜ್ಯಪಾಲರಾಗಿ, ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರಾಗಿ, ಓಂ ಪ್ರಕಾಶ್ ಮಾಥುರ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.