* ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಇಂದು (ಡಿಸೆಂಬರ್ 05) ಪ್ರಮಾಣವಚನ ಸ್ವೀಕರಿಸಲಿದ್ದಾರೆ.* ಬುಧವಾರ(ಡಿಸೆಂಬರ್ 04) ನಡೆದ ಬಿಜೆಪಿಯ ಸಭೆಯಲ್ಲಿ 54 ವರ್ಷದ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಮುಖ್ಯಮಂತ್ರಿ ಎಂದು ತೀರ್ಮಾನಿಸಲಾಗಿದೆ.* ಮಹಾರಾಷ್ಟ್ರ ರಾಜ್ಯದಲ್ಲಿ 'ಮಹಾಯತಿ' ಮೈತ್ರಿಕೂಟದ ಹೊಸ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಹಾಗು ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ ಅವರು ನೂತನ ಮಹಾಯುತಿ ಸರಕಾರದಲ್ಲಿ ಉಪಮುಖ್ಯ ಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ.* ಇಂದು(ಡಿಸೆಂಬರ್ 05) ಮುಂಬೈನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಏಕನಾಥ್ ಶಿಂಧೆ, ಅಜಿತ್ ಪವಾರ್ ಸಹ ಪ್ರಮಾಣ ವಚನವನ್ನು ಸ್ವೀಕಾರ ಮಾಡಲಿದ್ದಾರೆ.* ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 145. 288 ಸದಸ್ಯ ಬಲದ ಮಹಾರಾಷ್ಟ್ರದ ವಿಧಾನಸಭೆಯಲ್ಲಿ 'ಮಹಾಯತಿ' ಮೈತ್ರಿಕೂಟ 230 ಶಾಸಕರ ಬಲ ಹೊಂದಿದೆ. ಮೂರನೇ ಬಾರಿಗೆ ಮಹಾರಾಷ್ಟ್ರದ ಸಿಎಂ ಆಗಲಿದ್ದಾರೆ.* ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಬಿಜೆಪಿ ಎನ್ಡಿಎ ಆಡಳಿತದ ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದಾರೆ.* ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹೊರತುಪಡಿಸಿ ಇನ್ನೂ ಕೆಲವು ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮೂರು ಪಕ್ಷಗಳ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.