* ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಸೋಮವಾರ(ಆಗಸ್ಟ್ 15) ಪ್ರಮಾಣ ವಚನ ಸ್ವೀಕರಿಸಿದರು.* ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಅವರು ಅವರಿಗೆ ಸಂಸ್ಕೃತದಲ್ಲಿ ಪ್ರಮಾಣ ವಚನ ಬೋಧಿಸಿದರು.* ಹಿಂದಿನ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಗೆದ್ದು ಅಧಿಕಾರ ಸ್ವೀಕರಿಸಿದ್ದರಿಂದ, ರಾಷ್ಟ್ರಪತಿ ದ್ರೌಪದಿ ಮುರ್ಮು ದೇವವ್ರತ್ ಅವರಿಗೆ ಹೆಚ್ಚುವರಿಯಾಗಿ ಮಹಾರಾಷ್ಟ್ರದ ರಾಜ್ಯಪಾಲರ ಹೊಣೆ ನೀಡಿದ್ದರು.* ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಚಿವರು, ಉನ್ನತ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.* 66 ವರ್ಷದ ದೇವವ್ರತ್ ಅವರು 2019ರಿಂದ ಗುಜರಾತ್ ರಾಜ್ಯಪಾಲರಾಗಿದ್ದು, ಹಿಂದಿ ಮತ್ತು ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.