Job Description: * ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ 2024ನೇ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗಳು ಆಯ್ಕೆಯಾಗಿವೆ. * ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪೃಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮಹತ್ಸಾಧನೆ ಮಾಡಿದ ಮಹನೀಯರು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲು ಕರ್ನಾಟಕ ರಾಜ್ಯ ಸರ್ಕಾರವು 2014 ರಲ್ಲಿ ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ಸ್ಥಾಪಿಸಿ ಆದೇಶ ಹೊರಡಿಸಿದೆ.* ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಶಸ್ತಿ ಫಲಕ ಹಾಗೂ ರೂ.5 ಲಕ್ಷ ನಗದು ಒಳಗೊಂಡಿರುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು 2014 ರಿಂದ ಪ್ರದಾನ ಮಾಡುತ್ತಾ ಬಂದಿದೆ.* 2023ರ ವರೆಗೆ 8 ವ್ಯಕ್ತಿಗಳು ಹಾಗೂ 2 ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2024ನೇ ಸಾಲಿನ ಪ್ರಶಸ್ತಿಯು ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕು, ಗೊಟ್ಟಿಕೆರೆಯ ಪ್ರೊ.ಜಿ.ಬಿ. ಶಿವರಾಜು ಮತ್ತು ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಸಂಸ್ಥೆಗೆ ವಿಂಗಡಿಸಿ ಪ್ರದಾನ ಮಾಡಲಾಗುತ್ತಿದೆ.* ಪ್ರಶಸ್ತಿ ಮೊತ್ತವನ್ನು ತಲಾ ರೂ.2.5 ಲಕ್ಷಗಳಂತೆ ಸಮನಾಗಿ ಪುರಸ್ಕಾರ ನೀಡಿ ಸ್ಮರಣಿಕೆ, ಪ್ರಶಸ್ತಿ ಪತ್ರದೊಂದಿಗೆ ಬರುವ ಅಕ್ಟೋಬರ್ 02 ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.