* ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಕಳಸಾ ನಾಲಾ ತಿರುವು ಯೋಜನೆಯ ಅನುಮೋದನೆಯನ್ನು ತಿರಸ್ಕರಿಸಿದೆ.* ಮಹದಾಯಿ ಯೋಜನೆಗೆ ಗೋವಾ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಸವಾಲನ್ನು ಉಲ್ಲೇಖಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಕಳಸಾ ನಾಲಾ ತಿರುವು ಯೋಜನೆಗೆ ಅನುಮೋದನೆ ನಿರಾಕರಿಸಿದೆ.* ಕರ್ನಾಟಕದ 435 ಎಕರೆ ಅರಣ್ಯ ಬಳಕೆಯಾಗುವ ಗೋವಾ- ತಮ್ಮಾರ್ 400 ಕೆ.ವಿ. ವಿದ್ಯುತ್ ಮಾರ್ಗಕ್ಕೆ ವನ್ಯಜೀವಿ ಮಂಡಳಿಯು ಷರತ್ತುಬದ್ಧ ಒಪ್ಪಿಗೆ ನೀಡಿದೆ. ಗೋವಾದ ಹೆಚ್ಚುವರಿ ವಿದ್ಯುತ್ ಮಾರ್ಗ ಯೋಜನೆಗೆ ರಾಜ್ಯದ ಕಾಡು ಒದಗಿಸುವ ಯೋಜನೆಗೆ ವಿರೋಧ ಇದೆ.* ಹುಬ್ಬಳ್ಳಿ-ಧಾರವಾಡ, ಸುತ್ತಮುತ್ತಲಿನ ನಗರಗಳು, ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಗುರಿ ಹೊಂದಿರುವ ಈ ಯೋಜನೆಗೆ ಮಹದಾಯಿ ನದಿ ನೀರು ವಿವಾದ ನ್ಯಾಯಮಂಡಳಿಯು 2018ರ ಆಗಸ್ಟ್ 14ರಂದು 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿತ್ತು.* ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವ ಭೂಪೇಂದರ್‌ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿಯ ಸ್ಥಾಯಿ ಸಮಿತಿಯ 79ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.* ವನ್ಯಜೀವಿ ಮಂಡಳಿಯ ತೀರ್ಮಾನವು ರಾಜ್ಯಕ್ಕೆ ನಕಾರಾತ್ಮಕವಾಗಿದ್ದರೆ, ಗೋವಾಕ್ಕೆ ಸಕಾರಾತ್ಮಕವಾಗಿದೆ.* ಮಹದಾಯಿ ಯೋಜನೆಯು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಮಹದಾಯಿ ನದಿಯ ಕಳಸಾ ಮತ್ತು ಬಂಡೂರಿ ಹೊಳೆಗಳ ಮೇಲೆ ಬ್ಯಾರೇಜ್‌ಗಳನ್ನು ನಿರ್ಮಿಸುವ ವಿವಾದಾತ್ಮಕ ಯೋಜನೆಯಾಗಿದೆ.* ರಾಜ್ಯಗಳ ನಡುವಿನ ವಿವಾದದಿಂದಾಗಿ ಯೋಜನೆಯು ಸ್ಥಗಿತಗೊಂಡಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಅನುಮೋದನೆಗಳನ್ನು ಪಡೆಯಲು ಕರ್ನಾಟಕ ಸರ್ಕಾರವು ಇನ್ನೂ ಕಾರ್ಯನಿರ್ವಹಿಸುತ್ತಿದೆ.