* ಯುಎಇಯಲ್ಲಿ 9ನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಂದು (ಅಕ್ಟೋಬರ್ 3) ಆರಂಭಗೊಳ್ಳಲಿದೆ.* ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಸೇರಿದಂತೆ ಒಟ್ಟು 10 ತಂಡಗಳು ಅರಬ್ ನಾಡಿನಲ್ಲಿ ನಡೆಯಲಿರುವ ಪ್ರತಿಷ್ಠಿತ ಟೂರ್ನಿಯಲ್ಲಿ ಟ್ರೋಫಿಗಾಗಿ ಸೆಣಸಾಡಲಿವೆ.* ದುಬೈ ಹಾಗೂ ಶಾರ್ಜಾ ಕ್ರೀಡಾಂಗಣಗಳು ಟೂರ್ನಿಗೆ ಆತಿಥ್ಯ ವಹಿಸಲಿದ್ದು, ಫೈನಲ್ ಸೇರಿದಂತೆ ಒಟ್ಟು 23 ಪಂದ್ಯಗಳು ನಡೆಯಲಿವೆ. ಟೂರ್ನಿಯು ಅ.20ರ ವರೆಗೆ ನಡೆಯಲಿದೆ. * ಉದ್ಘಾಟನಾ ಪಂದ್ಯದಲ್ಲಿ ಬಾಂಗ್ಲಾದೇಶ-ಸ್ಕಾಟೆಂಡ್ ಮುಖಾಮುಖಿಯಾಗಲಿದ್ದು, ದಿನದ 2ನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಶ್ರೀಲಂಕಾ ಪರಸ್ಪರ ಸೆಣಸಾಡಲಿವೆ.* ಟೂರ್ನಿಯ ಬಹುತೇಕ ದಿನ 2 ಪಂದ್ಯಗಳು ನಡೆಯಲಿದ್ದು, ದಿನದ ಮೊದಲ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಹಾಗೂ 2ನೇ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿವೆ.* 10 ತಂಡಗಳಿರುವ ಟೂರ್ನಿಯನ್ನು 2 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಲ್ಲಿ ತಲಾ 5 ತಂಡಗಳಿರಲಿವೆ. ಗುಂಪಿನ ಪ್ರತಿ ತಂಡಗಳು ತಲಾ ಒಂದು ಬಾರಿ ಮುಖಾಮುಖಿ ಯಾಗಲಿವೆ.ಗುಂಪಿನಲ್ಲಿ ಅಗ್ರ -2 ಸ್ಥಾನ ಪಡೆಯುವ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ.* ಅ.15ರಂದು ಗುಂಪು ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿವೆ. ಅ.17,18ಕ್ಕೆ ಸೆಮಿಫೈನಲ್, ಅ.20ಕ್ಕೆ ಫೈನಲ್ ಪಂದ್ಯ ನಿಗದಿಯಾಗಿದೆ.* 2020ರ ರನ್ನರ್-ಅಪ್ ಹರ್ಮನ್‌ ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಅಕ್ಟೋಬರ್ 4  ನ್ಯೂಜಿಲೆಂಡ್ ವಿರುದ್ಧ ಆಡುವ ಮೂಲಕ ಈ ಬಾರಿ ಅಭಿಯಾನ ಆರಂಭಿಸಲಿದೆ.