* ಆರು ದಶಕಗಳ ಕಾಲ ಭಾರತೀಯ ವಾಯು ಪಡೆಯ ಬೆನ್ನೆಲುಬಾಗಿದ್ದ ರಷ್ಯಾ ನಿರ್ಮಿತ ಮಿಗ್–21 ಯುದ್ಧ ವಿಮಾನವು ಸೆಪ್ಟೆಂಬರ್ 26ರಂದು ಅಧಿಕೃತವಾಗಿ ಸೇವೆಯಿಂದ ನಿವೃತ್ತಿಯಾಗಲಿದೆ.* ಚಂಡೀಗಢದ ವಾಯುನೆಲೆಯಲ್ಲಿ 23ನೇ ಸ್ಕ್ವಾಡ್ರನ್ಗೆ ಸೇರಿದ "ಪ್ಯಾಂಥರ್ಸ್" ಹೆಸರಿನ ಕೊನೆಯ ಮಿಗ್–21 ಯುದ್ಧ ವಿಮಾನಕ್ಕೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿದೆ.* ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಡಿಎಸ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ, ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಮತ್ತು ನೌಕಾ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.* 1965 ಮತ್ತು 1971ರ ಭಾರತ–ಪಾಕಿಸ್ತಾನ ಯುದ್ಧಗಳಲ್ಲಿ, 1999ರ ಕಾರ್ಗಿಲ್ ಯುದ್ಧದಲ್ಲಿ ಹಾಗೂ 2019ರ ಬಾಲಾಕೋಟ್ ವಾಯುದಾಳಿಯಲ್ಲಿ ಮಿಗ್–21 ಯುದ್ಧ ವಿಮಾನಗಳು ನಿರ್ಣಾಯಕ ಪಾತ್ರ ವಹಿಸಿದ್ದವು.