* ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ಝೆಡ್‌ಪಿಎಂ) ಪಕ್ಷ 27 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. * ಆಡಳಿತರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ.* 2019ರಲ್ಲಿ ಚುನಾವಣಾ ಆಯೋಗದಲ್ಲಿ ನೋಂದಾವಣೆಗೊಂಡ ಹೊಸ ಪಕ್ಷ ಝೆಡ್‌ಪಿಎಂ, ಕೆಲವೇ ವರ್ಷಗಳಲ್ಲಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯುವಷ್ಟು ಸ್ಥಾನಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದೆ. * ಈ ಪಕ್ಷದ ಸ್ಥಾಪಕ 73 ವರ್ಷದ ಲಾಲ್ದುಹೋಮಾ ಮಿಜೋರಾಂನ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಖ ಖಚಿತವಾಗಿದೆ. ಲಾಲ್ದುಹೋಮಾ ಅವರು ಪ್ರತಿಸ್ಪರ್ಧಿ ಎಂಎನ್‌ಎಫ್ ಪಕ್ಷದ ಅಭ್ಯರ್ಥಿ ವಿರುದ್ಧ 2,982 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.