* ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರೀಲಂಕಾದ ಅತ್ಯುನ್ನತ ನಾಗರಿಕ ಗೌರವ 'ಮಿತ್ರ ವಿಭೂಷಣ' ನೀಡಿ ಸನ್ಮಾನಿಸಲಾಗಿದೆ.* ಇದು ವಿದೇಶಿ ರಾಷ್ಟ್ರವೊಂದು ಪ್ರಧಾನಿ ಮೋದಿಗೆ ನೀಡಿದ 22ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು, ಎರಡೂ ದೇಶಗಳ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಉತ್ತೇಜಿಸಲು ಪ್ರಧಾನಿ ಮೋದಿ ಅವರ ಅಸಾಧಾರಣ ಪ್ರಯತ್ನಗಳಿಗಾಗಿ ಈ ಗೌರವವನ್ನು ನೀಡಲಾಗಿದೆ. * ಕೊಲಂಬೊದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರು ಈ ಪ್ರಶಸ್ತಿಯನ್ನು ಪ್ರಧಾನಿ ಮೋದಿಗೆ ನೀಡಿ ಗೌರವಿಸಿದರು.* ಶ್ರೀಲಂಕಾ ಜತೆಗಿನ ದ್ವಿಪಕ್ಷೀಯ ಸಂಬಂಧದ ಬೆಳವಣಿಗೆಯಲ್ಲಿ ಮೋದಿ ಅವರ ಪಾತ್ರವನ್ನು ಮೆಚ್ಚಿಕೊಂಡು ಈ ಪ್ರಶಸ್ತಿ ನೀಡಲಾಗಿದೆ.* ಈ ಕುರಿತು ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ, ‘ಶ್ರೀಲಂಕಾದ ಮಿತ್ರ ವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸುವುದು ನನಗೆ ಬಹುಮಾನವಾಗಿದೆ. ಈ ಗೌರವವು ನನ್ನ ಗೌರವ ಮಾತ್ರವಲ್ಲ, ಸಂಪೂರ್ಣ 140 ಕೋಟಿ ಭಾರತೀಯರ ಗೌರವವಾಗಿದೆ’ ಎಂದು ಹೇಳಿದ್ದಾರೆ.* 'ಈ ಪ್ರಶಸ್ತಿ ಭಾರತ ಹಾಗೂ ಶ್ರೀಲಂಕಾ ನಡುವಿನ ದೀರ್ಘಕಾಲಿಕ ಸ್ನೇಹ ಹಾಗೂ ಐತಿಹಾಸಿಕ ಸಂಬಂಧದ ಪ್ರತೀಕವಾಗಿದೆ. ಈ ಗೌರವಕ್ಕಾಗಿ ನಾನು ಶ್ರೀಲಂಕಾದ ಅಧ್ಯಕ್ಷರು, ಸರ್ಕಾರ ಮತ್ತು ಜನತೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದಿದ್ದಾರೆ.