* ದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ 275 ಲಕ್ಷಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ಜುಲೈ 21 ರಂದು (ಶುಕ್ರವಾರ) ತಿಳಿಸಿದೆ.* 'ಮಕ್ಕಳ ನಾಪತ್ತೆ ಪ್ರಕರಣದಲ್ಲಿ ಕರ್ನಾಟಕ ಮೂರನೇ ಸ್ಥಾನದಲಿದ್ದು, ರಾಜ್ಯದಲ್ಲಿ 27,528 ಮಕ್ಕಳು ನಾಪತ್ತೆಯಾಗಿದ್ದಾರೆ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ತಿಳಿಸಿದ್ದಾರೆ.* ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಸಚಿವಾಲಯವು ಟ್ರ್ಯಾಕ್ ಚೈಲ್ಡ್ ಪೋರ್ಟಲ್ ಅಭಿವೃದ್ದಿಯಿಂದ ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದೆ.