* ವಿಜಯಪುರದ ಮಮದಾಪುರ ಗ್ರಾಮ ಪಂಚಾಯಿತಿಯ 1,494.38 ಎಕರೆ ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪರಂಪರೆಯ ತಾಣ ಎಂದು ಘೋಷಿಸಿ ರಾಜ್ಯ ಸರ್ಕಾರ ಅಕ್ಟೋಬರ್ 16 ರಂದು (ಬುಧವಾರ) ಅಧಿಸೂಚನೆ ಹೊರಡಿಸಿದೆ.* ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು, ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ. * ಶ್ರೀಗಳ ಸ್ಮರಣಾರ್ಥ ಅವರ 2ನೇ ಪುಣ್ಯ ಸ್ಮರಣೆಯ ದಿನವಾದ ಜನವರಿ 2ರಂದು ವಿಜಯಪುರದಲ್ಲಿ ವಿಧ್ಯುಕ್ತವಾಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಫಲಕವನ್ನು ಅನಾವರಣ ಮಾಡಲಾಗುವುದು ಎಂದು ತಿಳಿಸಿದರು.* ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶೇ.5ರಷ್ಟು ಅರಣ್ಯ ಪ್ರದೇಶವಿದ್ದು, ವಿಜಯಪುರದಲ್ಲಿ ಶೇ.1ಕ್ಕಿಂತ ಕಡಿಮೆ ಇದೆ. ಸರ್ಕಾರ ಈ ಘೋಷಣೆಯು ಹಸಿರು ಹೊದಿಕೆಯ ಸಂರಕ್ಷಣೆಯನ್ನು ಉತ್ತೇಜಿಸುತ್ತದೆ ಎಂದು ತಿಳಿಸಿದರು.* ಮಮದಾಪುರ ಭಾಗದಲ್ಲಿನ ಅರಣ್ಯ ಪ್ರದೇಶಗಳ ಅಧಿಸೂಚನೆಯಾಗಿದ್ದು, ಪ್ರಸ್ತುತ ಸುಮಾರು 1494 ಎಕರೆ 38 ಗುಂಟೆ ವಿಸ್ತೀರ್ಣದ ಅರಣ್ಯವಿದೆ. ಪ್ರಾಣಿಸಂಕುಲ, ಪಕ್ಷಿ ಸಂಕುಲ, ಕೀಟ ಸಂಕುಲ ಮತ್ತು ಸಸ್ಯ ಸಂಕುಲದಿಂದ ಕೂಡಿರುವ ಶ್ರೀಮಂತ ಜೀವವೈವಿಧ್ಯತೆಯ ಈ ತಾಣಕ್ಕೆ ಸಿದ್ದೇಶ್ವರ ಸ್ವಾಮೀಜಿ ಜೀವವೈವೀಧ್ಯ ಪಾರಂಪರಿಕ ತಾಣ ಎಂದು ಜೀವವೈವಿಧ್ಯ ಕಾಯಿದೆ 2022ರ ಸೆಕ್ಷನ್ 37ರನ್ವಯ ಮರು ನಾಮಕರಣ ಮಾಡಲಾಗುತ್ತಿದೆ. * ಮಮದಾಪುರದ ಅಧಿಸೂಚಿತ ಅರಣ್ಯ ಎಲೆ ಉದುರುವ ಕಾಡು ಮತ್ತು ಕುರುಚಲು ಕಾಡುಗಳಿಂದ ಕೂಡಿದ ಪ್ರದೇಶವಾಗಿದ್ದು, ಚಿರತೆಗಳು, ನರಿಗಳು, ಕತ್ತೆ ಕಿರುಬಗಳು ಮತ್ತು ಹಲವಾರು ಪ್ರಭೇದದ ಪಕ್ಷಿಗಳ ತಾಣವಾಗಿದೆ. ಸಸ್ಯ ಸಂಕುಲ, ಕೀಟ ಸಂಕುಲದ ನೆಲೆವೀಡೂ ಆಗಿದೆ.