Job Description: • 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿಯೇ ನಡೆಸಲು ಅಂತಿಮ ನಿರ್ಧಾರ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಡಾಕ್ಟರ್ ಮಹೇಶ್ ಜೋಶಿ ಅವರು ಹೇಳಿದ್ದಾರೆ. • ಕನ್ನಡ ಸಾಹಿತ್ಯ ಸಮ್ಮೇಳನವು 1915 ರಲ್ಲಿ ಸ್ಥಾಪನೆಯಾಗಿದ್ದು ಮೊದಲನೆಯ ಸಾಹಿತ್ಯ ಸಮ್ಮೇಳನವು ಹೆಚ್.ವಿ. ನಂಜುಂಡಯ್ಯನವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. • ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಸಂಗೀತವನ್ನು ಉಳಿಸುವ ಮತ್ತು ಅಭಿವೃದ್ಧಿಪಡಿಸುವ ಉದ್ದೇಶ ಹೊಂದಿದೆ. • 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು 2020 ರಲ್ಲಿ ಕಲಬುರಗಿಯಲ್ಲಿ ಎಚ್. ಎಸ್. ವೆಂಕಟೇಶ್ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. • 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು 2021 ರಲ್ಲಿ ಹಾವೇರಿಯಲ್ಲಿ ದೊಡ್ಡ ರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಜರುಗಿತು.