Job Description: * ಕನ್ನಡ ಪುಸ್ತಕ ಪ್ರಾಧಿಕಾರವು 2025 ಜನವರಿ 13ರಂದು ‘ಮನೆಗೊಂದು ಗ್ರಂಥಾಲಯ’ ಯೋಜನೆಯ ಉದ್ಘಾಟನೆ ಹಾಗೂ ‘ಕುಮಾರವ್ಯಾಸ ಭಾರತ’ ಕೃತಿಯ ಬಿಡುಗಡೆ ಕಾರ್ಯಕ್ರಮವನ್ನು ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಆಯೋಜಿಸಿದೆ.* ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಯನ್ನು ಉದ್ಘಾಟಿಸಲಿದ್ದು, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಅವರ ಮನೆಯಲ್ಲಿ ಮೊದಲ ಗ್ರಂಥಾಲಯವನ್ನು ಉದ್ಘಾಟಿಸಲಿದ್ದಾರೆ. ಗ್ರಂಥಾಲಯ ಫಲಕದ ಅನಾವರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ನೆರವೇರಿಸಲಿದ್ದಾರೆ.* ‘ಕುಮಾರವ್ಯಾಸ ಭಾರತ ಎಂಬ ಕರ್ಣಾಟ ಭಾರತ ಕಥಾ ಮಂಜರಿ’ ಕೃತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಬಿಡುಗಡೆ ಮಾಡಲಿದ್ದಾರೆ.* ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳ, ನಿರ್ದೇಶಕ ಡಾ. ಕೆ. ಧರಣೀದೇವಿ ಮಾಲಗತ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ವಹಿಸಲಿದ್ದಾರೆ.