* ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ.* ಬುಧವಾರ 'ಕಾವೇರಿ' ಸರ್ಕಾರಿ ನಿವಾಸದಲ್ಲಿ ನಡೆದ ಜಲಸಾರಿಗೆ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಅವರು, ಬಂದರುಗಳ ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ ಮತ್ತು ಸರಕು ಸಾಗಣೆಗೆ ಅಗತ್ಯ ಮೂಲ ಸೌಲ್ಯಬಗ್ಗೆ ಚರ್ಚೆ ನಡೆಸಿದರು.* ಮಂಗಳೂರು ಸಾಗರಮಾಲಾ ಯೋಜನೆಯಡಿಯಲ್ಲಿ ಜಲಸಾರಿಗೆ ತರಬೇತಿ ಕೇಂದ್ರ ಸ್ಥಾಪನೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದರು. ಪುನರ್ವಸತಿ ಹಾಗೂ ಬಂದರು ಚಟುವಟಿಕೆಗಳ ಭೂಮಿ ಗುತ್ತಿಗೆ ಅವಧಿ ಪರಿಶೀಲನೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಅತಿಕ್ರಮಿತ ಪ್ರದೇಶಗಳನ್ನು ತಕ್ಷಣ ತೆರವುಗೊಳಿಸಲು ಆದೇಶಿಸಿದರು.* ಉತ್ತರ ಕನ್ನಡ ಜಿಲ್ಲೆಯ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಡ್ರೋಣ್ ಸರ್ವೇ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.* ಆಂಧ್ರ ಪ್ರದೇಶ, ವಿಶಾಖಪಟ್ಟಣ, ಕೇರಳ, ತಮಿಳುನಾಡು ಹಾಗೂ ಗುಜರಾತ್ ರಾಜ್ಯಗಳ ಬಂದರುಗಳ ಕಾರ್ಯನಿರ್ವಹಣೆಯ ಬಗ್ಗೆ ಅಧ್ಯಯನ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.* ಮುಖ್ಯಮಂತ್ರಿ ‘ಕರ್ನಾಟಕ ಜಲಸಾರಿಗೆ ನೀತಿ - 2024’ ಬಿಡುಗಡೆ ಮಾಡಿ, ರಾಜ್ಯದ ಬಂದರುಗಳ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ಮತ್ತು ಸೌಲಭ್ಯ ಒದಗಿಸುವ ಭರವಸೆ ನೀಡಿದರು.* ಸಭೆಯಲ್ಲಿ ಸಚಿವ ಮಂಕಾಳು ವೈದ್ಯ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.