* ಮಂಗನಕಾಯಿಲೆ ಇರುವ ಬಿಪಿಲ್ ಕಾರ್ಡ್ದಾರರಿಗೆ ಒದಗಿಸಲಾಗುವ ಉಚಿತ ಚಿಕಿತ್ಸೆಯನ್ನು ಇದೀಗ ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.* ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್ಡಿ- ಮಂಗನ ಕಾಯಿಲೆ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.* ರೋಗದಿಂದ ಬಾಧಿತ ಬಿಪಿಎಲ್ ಕಾರ್ಡ್ದಾರರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ.* ರಾಜ್ಯದಲ್ಲಿ ಮಂಗನಕಾಯಿಲೆಯಿಂದ ಬಾಧಿತರಾದ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ ಎಂದ ಹೇಳಿದ್ದಾರೆ.* ಒಂದೇ ದಿನ ಚಿಕ್ಕಮಗಳೂರಲ್ಲಿ ನಾಲ್ವರಿಗೆ ಮಂಗನಕಾಯಿಲೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ರಾಜ್ಯದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದೆ ಎಂಬುದಾಗಿ ವರದಿಯಾಗಿತ್ತು.* ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.