* ಅಮೆರಿಕ ಸರ್ಕಾರದ ಅಧಿಕಾರಿಯೊಬ್ಬರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೀಘ್ರದಲ್ಲೇ ಭೇಟಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇಬ್ಬರೂ ಧನಾತ್ಮಕ ಸಂಬಂಧ ಹೊಂದಿದ್ದಾರೆ ಎಂದು ಅವರು ಹೇಳಿದರು.* ಮುಂದಿನ ಕ್ವಾಡ್ ಶೃಂಗಸಭೆಯ ಆತಿಥ್ಯವನ್ನು ಭಾರತ ವಹಿಸಲಿದೆ. ಅಮೆರಿಕ, ಆಸ್ಟ್ರೇಲಿಯಾ ಹಾಗೂ ಜಪಾನ್ ಸದಸ್ಯ ರಾಷ್ಟ್ರಗಳಾಗಿವೆ. * ಈ ಮೊದಲು 2024ರಲ್ಲಿ ಅಮೆರಿಕದ ಡೆಲಾವೆರ್ನ ವಿಲ್ಮಿಂಗ್ಟನ್ನಲ್ಲಿ ಸಭೆ ನಡೆದಿತ್ತು.* ಅಧಿಕಾರಿಯ ಪ್ರಕಾರ, ಶೃಂಗಸಭೆಯ ವಿಷಯ ಶೀಘ್ರದಲ್ಲೇ ಪ್ರಕಟವಾಗಲಿದೆ. ಮೋದಿ–ಟ್ರಂಪ್ ಭೇಟಿಯು ಶೃಂಗಸಭೆಗೂ ಮುನ್ನವೇ ಅಥವಾ ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ಸಾಧ್ಯತೆ ಇದೆ.