* ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ SGVNನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎನ್‌.ಎಲ್. ಶರ್ಮಾ ಅವರು ವಿದ್ಯುತ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಅಗರ್ವಾಲ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.* ಈ ಪ್ರಶಸ್ತಿಗಳಿಗಾಗಿ ಸಾರ್ವಜನಿಕ ವಲಯದ ಉದ್ಯಮಗಳ (ಪಿಎಸ್‌ಯು) ಮೌಲ್ಯಮಾಪನವು ಸಾರ್ವಜನಿಕರಲ್ಲಿ ಸ್ವಚ್ಛ ಭಾರತ ಅಭಿಯಾನದ ಕುರಿತು ಜಾಗೃತಿ ಮೂಡಿಸಲು ಕೈಗೊಂಡ ಉಪಕ್ರಮಗಳು ಸೇರಿದಂತೆ ವಿವಿಧ ಮಾನದಂಡಗಳನ್ನು ಆಧರಿಸಿದೆ. * ಪವರ್ ಗ್ರಿಡ್ ಮತ್ತು ಪಿಎಫ್‌ಸಿಗೆ ಕ್ರಮವಾಗಿ ಎರಡು ಮತ್ತು ಮೂರನೇ ಬಹುಮಾನಗಳನ್ನು  ಪಡೆದುಕೊಂಡಿವೆ.