* ಅರಣ್ಯ ಸಂರಕ್ಷಣೆಗೆ ಹಲವು ನಿಯಮಗಳನ್ನು ಪ್ರಕಟಿಸಿರುವ ಸುಪ್ರೀಂಕೋರ್ಟ್ ಹೊಸದಾಗಿ ಮೃಗಾಲಯ ಪ್ರಾರಂಭಿಸಲು ಮತ್ತು ಅರಣ್ಯ ಪ್ರದೇಶಗಳಲ್ಲಿ ಸಫಾರಿ ಪ್ರಾರಂಭಿಸಲು ತನ್ನ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಆದೇಶ ಹೊರಡಿಸಿದೆ.  * ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳಿಗೆ ತಿದ್ದುಪಡಿ ಕಾಯಿದೆಯಡಿ ಅರಣ್ಯ ಗುರುತಿಸುವ ನಿಯಮಾವಳಿ ಜಾರಿಯಾಗುವವರೆಗೆ ಪ್ರಸ್ತುತ ಅಸ್ತಿತ್ವದಲ್ಲಿರುವ 'ಅರಣ್ಯ' ವ್ಯಾಖ್ಯಾನಕ್ಕೆ ಬದ್ಧರಾಗಿರುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ ಹೇಳಿದೆ.* ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ, 'ಅರಣ್ಯ' ಎಂಬ ಪದದ ಅರ್ಥವನ್ನು ರಕ್ಷಿಸಲಾಗುವುದು ಎಂದು ಪುನರುಚ್ಚರಿಸಿದರು.