Job Description: * ಟೆಸ್ಲಾ ಕಂಪನಿಯ ಸಿಇಒ ಎಲಾನ್‌ ಮಸ್ಕ್ ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಕಳೆದ ಎರಡು ತಿಂಗಳ ಕಾಲ ಶ್ರೀಮಂತರ ಪಟ್ಟಿಯಲ್ಲಿ ಎರಡೆನೇ ಸ್ಥಾನದಲ್ಲಿದ್ದರು. * ಬ್ಲೂಮ್‌ಬರ್ಗ್‌ನ ರಿಯಲ್‌ ಟೈಂ ಬಿಲಿಯನೇರ್ ಇಂಡೆಕ್ಸ್ ಪ್ರಕಾರ, 187.1 ಬಿಲಿಯನ್ ಡಾಲರ್ ಆಗಿದ್ದು, 185.3 ಬಿಲಿಯನ್ ಡಾಲರ್ ಮೌಲ್ಯದ ಸಂಪತ್ತನ್ನು ಹೊಂದಿರುವ ಆರ್ನಾಲ್ಟ್ ಅವರನ್ನು ಹಿಂದಿಕ್ಕಿದ್ದಾರೆ. * 2021 ರಲ್ಲಿ ಮಸ್ಕ್ ಅವರು ಫೋರ್ಬ್ಸ್ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದರು. ಅವರ ವೈಯಕ್ತಿಕ ಸಂಪತ್ತಿನ ಮೌಲ್ಯ 185.3 ಶತಕೋಟಿ ಡಾಲರ್ ಆಗಿದೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಪಟ್ಟ ಮಸ್ಕ್ ಕೈತಪ್ಪಿದ ಬೆನ್ನಲ್ಲೇ ಟೆಸ್ಲಾ ಷೇರು ಮೌಲ್ಯದಲ್ಲಿ ಶೇಕಡಾ 4ರಷ್ಟು ಕುಸಿತವಾಗಿದೆ.* 44 ಬಿಲಿಯನ್ ಡಾಲರ್ ಖರ್ಚು ಮಾಡಿ ಟ್ವಿಟ್ಟರ್ ಅನ್ನು ಖರೀದಿಸಿದ ಮಸ್ಕ್ ಕಂಪನಿ ದಿನಕ್ಕೆ ಸುಮಾರು 4 ಮಿಲಿಯನ್ ಡಾಲರ್ ನಷ್ಟವನ್ನು ಅನುಭವಿಸುತ್ತಿದೆ ಎಂದು ನವೆಂಬರ್‌ನಲ್ಲಿ ತಿಳಿಸಿದ್ದಾರೆ.