* ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಟೀಮ್ ಇಂಡಿಯಾ ಆಲ್ರೌಂಡ್ ಪ್ರದರ್ಶನದಿಂದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 142 ರನ್ಗಳ ಭರ್ಜರಿ ಜಯ ಸಾಧಿಸಿದೆ.* ಈ ಗೆಲುವಿನೊಂದಿಗೆ, ಭಾರತ ಇಂಗ್ಲೆಂಡ್ ವಿರುದ್ಧ 3-0 ಸರಣಿಯನ್ನು ಕ್ಲಿನ್ ಸ್ವೀಪ್ ಮಾಡಿದೆ.* ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ 357 ರನ್ಗಳ ಬೃಹತ್ ಮೊತ್ತವನ್ನು ಗಳಿಸಿ, ಇನ್ನಿಂಗ್ಸ್ನ ಕೊನೆಯ ಎಸೆತದಲ್ಲಿ ಆಲೌಟ್ ಆಯಿತು.* ಆರಂಭಿಕ ಆಟಗಾರ ಶುಭಮನ್ ಗಿಲ್ ಅದ್ಭುತ ಶತಕ ಸೇರಿದಂತೆ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ನಿರ್ಣಾಯಕ ಅರ್ಧಶತಕಗಳ ಗಳಿಸಿದರು.* ಇಂಗ್ಲೆಂಡ್ನ ಆದಿಲ್ ರಶೀದ್ ಅತ್ಯುತ್ತಮ ಬೌಲರ್ ಆಗಿದ್ದು ನಾಲ್ಕು ವಿಕೆಟ್ಗಳನ್ನು ಪಡೆದರು. ಮಾರ್ಕ್ ವುಡ್ ಎರಡು ವಿಕೆಟ್ ಪಡೆದರು. ಜೋ ರೂಟ್ ಮತ್ತು ಸಕೀಬ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.* ಭಾರತ ನೀಡಿದ 358 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ಇಂಗ್ಲೆಂಡ್ 214 ರನ್ ಗಳಿಗೆ ಆಲೌಟ್ ಆಯಿತು.* ಭಾರತ ತಂಡದ ಅರ್ಷದೀಪ್ ಸಿಂಗ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು ಆರಂಭಿಕ ಪಿಲ್ ಸಾಲ್ಟ್ 23 ಮತ್ತು ಬೆನ್ ಡಕೆಟ್ 34 ರನ್ ಗಳಿಗೆ ಔಟ್ ಮಾಡಿದರು. ಟಾಮ್ ಬ್ಯಾಂಟನ್ 38 ರನ್ ಗಳಿಸಿ ಔಟಾದರು. ಗಸ್ ಅಟ್ಕಿನ್ಸನ್ ಅತ್ಯುತ್ತಮವಾಗಿ 38 ರನ್ ಬಾರಿಸಿದರು. ಆದರೆ ನಂತರ ಬಂದ ಆಟಗಾರರು ರನ್ ಗಳಿಸುವಲ್ಲಿ ವಿಫಲರಾದರು.* ಭಾರತದ ಪರ ಅರ್ಷ್ ದೀಪ್, ಹರ್ಷಿತ್ ರಾಣಾ, ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದರೆ ವಾಷಿಂಗ್ಟನ್ ಸುಂದರ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.* ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾರತ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಭಾಜನರಾದರು.