Job Description: * ಕೇರಳ ಸರ್ಕಾರವು ವಿಜ್ಞಾನ, ಸಂಶೋಧನೆ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವ ಮೂಲಕ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯದಲ್ಲಿ ಮೂರು ವಿಜ್ಞಾನ ಪಾರ್ಕ್‌ ಸ್ಥಾಪಿಸಲು ನಿರ್ಧರಿಸಿದೆ.* ನೂತನ ಯೋಜನೆಗೆ ಮಾ.23ರಂದು ಕೇರಳ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ಶೈಕ್ಷಣಿಕ ಸಂಸ್ಥೆಗಳು, ಹೈ-ಟೆಕ್ ಕಂಪನಿಗಳು, ಉದ್ಯಮಿಗಳು ಮತ್ತು ಸ್ಟಾರ್ಟಪ್‌ಗಳಿಗೆ ನೆರವಾಗಲಿದೆ.* ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 7600 ಕೋಟಿ ವೆಚ್ಚದಲ್ಲಿ ಮೂರು ವಿಜ್ಞಾನ ಪಾರ್ಕ್ ಆರಂಭಿಸುವುದಾಗಿ ಅವರು ಮಾರ್ಚ್ 25 ರಂದು ತಿಳಿಸಿದ್ದಾರೆ. ವಿಜ್ಞಾನ ಪಾರ್ಕ್ ಮೂಲಕ ನೂತನ ತಂತ್ರಜ್ಞಾನ ಮತ್ತು ಉತ್ಪನ್ನ ಅಭಿವೃದ್ಧಿಗೆ ವಿಶ್ವದರ್ಜೆಯ ಪ್ರತಿಭೆಗಳನ್ನು ಸೆಳೆಯಲು ಕೇರಳ ಯೋಜನೆ ರೂಪಿಸುತ್ತಿದೆ.