* ಮೈಸೂರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ 413ನೇ  ನಾಡಹಬ್ಬ ದಸರಾ ಮಹೋತ್ಸವ 15/10/2023ರಂದು ಖ್ಯಾತ ಸಂಗೀತಗಾರ, ನಿರ್ದೇಶಕ, ಚಿತ್ರ ಸಾಹಿತಿ, ನಾದಬ್ರಹ್ಮ ಹಂಸಲೇಖ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. *  ಧಾರ್ಮಿಕ ತಾಣ ಚಾಮುಂಡಿಬೆಟ್ಟದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಳಗ್ಗೆ 15 ಅಕ್ಟೋಬರ್ ರಂದು 10.18ಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಬೆಳ್ಳಿ ರಥದಲ್ಲಿ ಇರಿಸಿದ್ದ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.* ಮಧ್ಯಾಹ್ನ 12:30 ಕ್ಕೆ ನಗರದ ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲಾಯಿತು.* ಮಧ್ಯಾಹ್ನ 1 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಎಚ್ ಮುನಿಯಪ್ಪ ನೆರವೇರಿಸಿದರು.* ಈ ಬಾರಿ(2023) ದಸರಾ ಉದ್ಘಾಟನೆ ನೆರವೇರಿಸಿದ ಹಂಸಲೇಖ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ ಮೈಸೂರು ಪೇಟ ತೊಡಿಸಿ, ಸರಸ್ವತಿ ವಿಗ್ರಹ, ಫಲ ತಾಂಬೂಲು ನೀಡಿ ಗೌರವಿಸಿದರು.