* ರಾಜ್ಯದಲ್ಲಿರುವ ಎಲ್ಲ ಅಂಗಡಿ, ಆಸ್ಪತ್ರೆ, ಹೋಟೆಲ್ ಮತ್ತು ವ್ಯಾಪಾರ ಸ್ಥಳಗಳ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಕಡ್ಡಾಯವಾಗಿ ಇರಲೇಬೇಕು.   * ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.* ಸಭೆಯಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹಮದ್ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.* ವಿವಿಧ ರಾಜ್ಯಗಳಿಂದ ಜನರು ವ್ಯವಹಾರ ನಡೆಸಲು ಬೆಂಗಳೂರಿಗೆ ಬರುತ್ತಾರೆ. ಆದರೆ ಅವರು ಇಂಗ್ಲಿಷ್‌ನಲ್ಲಿ ಮಾತ್ರ ನಾಮಫಲಕ ಹಾಕುತ್ತಾರೆ. ಅವರು ಬೆಂಗಳೂರಿನಲ್ಲಿ ಇರಬೇಕು ಎಂದರೆ, ತಮ್ಮ ಅಂಗಡಿಗಳಲ್ಲಿ ಕನ್ನಡದಲ್ಲಿ ಫಲಕಗಳನ್ನು ಅಳವಡಿಸಬೇಕು. ಇಲ್ಲದಿದ್ದರೆ ಅವರು ಕರ್ನಾಟಕ ಬಿಟ್ಟು ಬೇರೆ ರಾಜ್ಯಕ್ಕೆ ಹೋಗಲಿ ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಆಗ್ರಹಿಸಿದ್ದಾರೆ.