* ವಿವಿಧ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿದ ಮಹಿಳೆಯರಿಗೆ ಅಂತರರಾಷ್ಟ್ರೀಯ ಮಹಿಳಾ ದಿನದಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ಹಸ್ತಾಂತರಿಸುವ ಮೂಲಕ 'ನಾರಿಶಕ್ತಿ'ಯನ್ನು ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.* ಭಾನುವಾರ (ಫೆ.23) ಪ್ರಸಾರವಾದ 119ನೇ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ ಮಹಿಳೆಯರು ಮಾರ್ಚ್ 8ರಂದು (ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ) ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಸಂವಾದ ನಡೆಸಲಿದ್ದಾರೆ.* ಈ ಮೂಲಕ ಅವರು ಯಶಸ್ಸಿಗೆ ದಾರಿ ಬಂದ ಅಡೆತಡೆಗಳನ್ನು ಎದುರಿಸಿ ಮೆಟ್ಟಿನಿಂತ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದರು.* ಜಾರ್ಖಂಡ್ನ ನಾಲ್ವರ ಗುಂಪು ಕಾರ್ಮಿಕರ ರಕ್ಷಣೆಗೆ ಬೆಂಬಲ ನೀಡಿದ ಸಿಎಂ ಸೊರೇನ್ ಮಹಿಳೆಯರನ್ನು ಗೌರವಿಸಬೇಕೆಂದು ಸಲಹಿಸಿದ ಮೋದಿ, ಅವರ ಯಶಸ್ಸುಗಳನ್ನು ಸ್ಮರಿಸಬೇಕೆಂದು ಹೇಳಿದ್ದಾರೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚುತ್ತಿರುವುದನ್ನು ಶ್ಲಾಘಿಸಿದ್ದಾರೆ.* ಈ ಸಂದರ್ಭದಲ್ಲಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ನಾಗರಿಕರು ತಮ್ಮ ಆರೋಗ್ಯದತ್ತ ಗಮನಹರಿಸಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಅತಿಯಾದ ತೂಕದ ಸಮಸ್ಯೆ ಹೆಚ್ಚುತ್ತಿದ್ದು, ಈ ಕುರಿತು ಎಲ್ಲರೂ ಜಾಗೃತರಾಗಬೇಕೆಂದು ಸೂಚಿಸಿದ್ದಾರೆ.