* ನೌಕಾಪಡೆಗಾಗಿ 19 ಸಾವಿರ ಕೋಟಿ ವೆಚ್ಚದಲ್ಲಿ 200ಕ್ಕೂ ಅಧಿಕ ಬ್ರಹ್ಮೋಸ್‌ ಸೂಪರ್ ಸಾನಿಕ್‌ ಕ್ರೂಸ್‌ ಕ್ಷಿಪಣಿಗಳು ಹಾಗೂ ಸಂಬಂಧಿಸಿದ ಸಾಧನಗಳನ್ನು ಖರೀದಿ ಮಾಡಲು ಭದ್ರತೆ ಕುರಿತ ಸಂಪುಟ ಸಮಿತಿ ಒಪ್ಪಿಗೆ ನೀಡಿದೆ ಎಂದು ಮೂಲಗಳು ಫೆಬ್ರುವರಿ 22 ರಂದು (ಗುರುವಾರ) ತಿಳಿಸಿವೆ.* ವಿವಿಧ ಯುದ್ಧನೌಕೆಗಳಲ್ಲಿ ಈ ಕ್ಷಿಪಣಿಗಳನ್ನು ನಿಯೋಜನೆ ಮಾಡುವ ಮೂಲಕ ನೌಕಾಪಡೆಯ ದಾಳಿ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ತಿಳಿಸಿದೆ.* ಉಪಗ್ರಹಗಳ ಕ್ಷಿಪಣಿಗಳನ್ನು ಖರೀದಿ ಮಾಡಲು ಮುಂದಾದ ಬ್ರಹ್ಮೋಸ್‌ ಕ್ಷಿಪಣಿಗಳು ವಿವಿಧ ವ್ಯಾಪ್ತಿಯನ್ನು ಹೊಂದಿವೆ. ಕೆಲವು ಕ್ಷಿಪಣಿಗಳು 290 ಕಿ.ಮೀ. ವ್ಯಾಪ್ತಿ ವರೆಗಿನ ಗುರಿಗಳನ್ನು ನಾಶ ಮಾಡುವ ಸಾಮರ್ಥ್ಯ ಹೊಂದಿದ್ದರೆ, ಇನ್ನೂ ಕೆಲವು ಕ್ಷಿಪಣಿಗಳ ಸಾಮರ್ಥ್ಯ 450 ಕಿ.ಮೀ. ವರೆಗಿನ ವ್ಯಾಪ್ತಿಯನ್ನು ಹೊಂದಿವೆ.* ಭಾರತ ಮತ್ತು ರಷ್ಯಾ ಸಹಭಾಗಿತ್ವದ ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಈ ಸೂಪರ್‌ ಸಾನಿಕ್ ಕ್ರೂಸ್ ಕ್ಷಿಪಣಿಗಳನ್ನು ಉತ್ಪಾದಿಸಲಿದೆ. ಈ ಕ್ಷಿಪಣಿಗಳನ್ನು ಜಲಾಂತರ್ಗಾಮಿಗಳು, ಯುದ್ಧನೌಕೆಗಳು ಮತ್ತು ಯುದ್ಧವಿಮಾನಗಳಿಂದ ಉಡಾವಣೆ ಮಾಡಬಹುದಾಗಿದೆ ಎಂದು ತಿಳಿದು ಬಂದಿದೆ.