* ನೇಪಾಳದಲ್ಲಿ ಭ್ರಷ್ಟಾಚಾರದ ವಿರುದ್ಧ ಉಂಟಾದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಅದರ ನಡುವೆ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ರಾಜೀನಾಮೆ ನೀಡಿದ್ದಾರೆ. * ಪ್ರತಿಭಟನೆ ತೀವ್ರವಾಗುತ್ತಿದ್ದಂತೆ, ಓಲಿ ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.* ಕಠ್ಮಂಡುವಿನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ 20 ಮಂದಿ ಸಾವನ್ನಪ್ಪಿ, 250 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸರ್ಕಾರ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧವನ್ನು ತೆಗೆದರೂ ಪ್ರತಿಭಟನೆಗಳು ಶಮನವಾಗಿಲ್ಲ.* ಪ್ರತಿಭಟನಾಕಾರರು ಓಲಿ ಅವರ ರಾಜೀನಾಮೆ ಮತ್ತು ಸರ್ಕಾರ ವಜಾ ಆಗಬೇಕೆಂದು ಒತ್ತಾಯಿಸಿದ್ದಾರೆ. ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಓಲಿ ಸೇನಾ ಮುಖ್ಯಸ್ಥ ಅಶೋಕ್ ರಾಜ್ ಸಿಗ್ಡೆಲ್ ಅವರ ಸಹಾಯವನ್ನು ಕೋರಿದರು. ಸೇನಾ ಮುಖ್ಯಸ್ಥರು ಪರಿಸ್ಥಿತಿ ಸ್ಥಿರಗೊಳಿಸಲು ಓಲಿ ಹುದ್ದೆ ತ್ಯಜಿಸಬೇಕೆಂದು ಹೇಳಿದ್ದಾರೆ.* ರಾಜಧಾನಿ ಕಠ್ಮಂಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಇದ್ರಲ್ಲಿಯೂ ಪ್ರತಿಭಟನಾಕಾರರು ಬೀದಿಗಿಳಿದು ಕಲ್ಲುತೂರಾಟ ನಡೆಸಿದ್ದು, ನೇಪಾಳ ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಅವರ ನಿವಾಸಕ್ಕೂ ಬೆಂಕಿ ಹಚ್ಚಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.