* ನೇಪಾಳದ ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕಾರ್ಕಿ ಅವರು ಭಾನುವಾರ(ಆಗಸ್ಟ್ 14) ಹಂಗಾಮಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. 73 ವರ್ಷದ ಕಾರ್ಕಿ ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿದ್ದಾರೆ.* ಅವರ ಸಂಪುಟಕ್ಕೆ ಮೂವರು ಸಚಿವರು ಸೇರ್ಪಡೆಯಾಗಿದ್ದು, ಅಧ್ಯಕ್ಷ ರಾಮಚಂದ್ರ ಪೌಡೆಲ್ ಸೋಮವಾರ(ಆಗಸ್ಟ್ 15) ಅವರಿಗೆ ಪ್ರಮಾಣವಚನ ಬೋಧಿಸಿದರು.* ಕುಲ್ಮನ್ ಘಿಸಿಂಗ್ ಇಂಧನ, ಜಲ ಸಂಪನ್ಮೂಲ, ನೀರಾವರಿ, ಭೌತಿಕ ಮೂಲಸೌಕರ್ಯ ಮತ್ತು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರವಹಿಸಿಕೊಂಡರು.* ರಾಮೇಶ್ವರ್ ಖನಾಲ್ ಹಣಕಾಸು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. * ವಕೀಲ ಓಂ ಪ್ರಕಾಶ್ ಆರ್ಯಲ್ ಗೃಹ ವ್ಯವಹಾರ ಮತ್ತು ಕಾನೂನು, ನ್ಯಾಯ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.* ಭ್ರಷ್ಟಾಚಾರ ಮತ್ತು ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧದ ವಿರುದ್ಧ ನಡೆದ ದೇಶವ್ಯಾಪಿ ಪ್ರತಿಭಟನೆಯ ನಡುವೆಯೇ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದರು. ಇದರಿಂದ ಕಾರ್ಕಿ ಅವರನ್ನು ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ.