Job Description: * ಸ್ವಾತಂತ್ರ್ಯ ಹೋರಾಟಕ್ಕೆ ನೇತಾಜಿ ಅವರ ಕೊಡುಗೆಯನ್ನು ಕಡೆಗಣಿಸುವ ಪ್ರಯತ್ನ ನಡೆಯುತ್ತಿದೆ.ಆದರೆ, ಇಡೀ ದೇಶ ಇಂದು ಅವರನ್ನು ನೆನಪಿಸಿಕೊಳ್ಳುತ್ತಿದೆ. ವಸಾಹತುಶಾಹಿ ಆಳ್ವಿಕೆಗೆ ತೋರಿದ ಪ್ರತಿರೋಧಕ್ಕಾಗಿ ನೇತಾಜಿ ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ. ಅವರ ಚಿಂತನೆಗಳಿಂದ ನಾನು ಭಾರಿ ಪ್ರಭಾವಕ್ಕೆ ಒಳಗಾಗಿದ್ದೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.* ನೇತಾಜಿ ಸುಭಾಸ್‌ ಚಂದ್ರ ಬೋಸ್‌ ಅವರ ಹೆಸರಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಸ್ಮಾರಕದ ಮಾದರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದಾರೆ. ಇದು ಅಂಡಮಾನ್‌–ನಿಕೋಬಾರ್‌ ದ್ವೀಪದಲ್ಲಿ ನಿರ್ಮಾಣ ಆಗಲಿದೆ. ಈ ಸ್ಮಾರಕವು ಜನರಲ್ಲಿ ದೇಶಪ್ರೇಮದ ಭಾವನೆಯನ್ನು ತುಂಬಲಿದೆ ಎಂದು ಮೋದಿ ಹೇಳಿದ್ದಾರೆ. * ನೇತಾಜಿ ಅವರ 126ನೇ ಜನ್ಮದಿನದ ಪ್ರಯುಕ್ತ ಈ ಕಾರ್ಯಕ್ರಮ ನಡೆದಿದೆ.ಮೋದಿ ಅವರು ವರ್ಚುವಲ್‌ ಆಗಿ ಕಾರ್ಯಕ್ರಮದಲ್ಲಿ ಭಾಗಿಯಾದರು. 21 ದ್ವೀಪಗಳಿಗೆ ಪರಮವೀರ ಚಕ್ರ ಪುರಸ್ಕೃತರ ಹೆಸರು ಇರಿಸಲಾಗಿದೆ.