* ರಾಷ್ಟ್ರ ರಾಜಧಾನಿ ದೆಹಲಿಯ ತೀನ್‌ ಮೂರ್ತಿ ಭವನ ಆವರಣದಲ್ಲಿರುವ 'ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ'ಯನ್ನು (ಎನ್‌ಎಂಎಂಎಲ್‌) 'ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ' ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆಯನ್ನು ನೀಡಿದ್ದಾರೆ.** ತೀನ್‌ ಮೂರ್ತಿ ಭವನ: * ಬ್ರಿಟಿಷರ ಆಳ್ವಿಕೆ ವೇಳೆಯಲ್ಲಿ ನಿರ್ಮಿಸಲಾದ ತೀನ್‌ ಮೂರ್ತಿ ಭವನ, ದೇಶ ಸ್ವಾತಂತ್ರ್ಯ ಪಡೆದ ನಂತರ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಅಧಿಕೃತ ನಿವಾಸವಾಗಿತ್ತು. ನೆಹರೂ ಅವರು ಈ ನಿವಾಸದಲ್ಲಿ ಸತತ16 ವರ್ಷಗಳಿಗೂ ಹೆಚ್ಚು ಕಾಲ ವಾಸವಾಗಿದ್ದರು. * ನೆಹರೂ ಅವರ 75ನೇ ಜನ್ಮದಿನದ ನೆನಪಿಗಾಗಿ 1964ರಲ್ಲಿ ಈ ಭವನದಲ್ಲಿ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸ್ಥಾಪಿಸಿ, ಸಮರ್ಪಿಸಲಾಯಿತು ಸ್ವಾಯತ್ತ ಸ್ಥಾನಮಾನ ನೀಡಲಾಯಿತು * ಇದರ ಅಂಗವಾಗಿ 1966ರ ಏಪ್ರಿಲ್ 1ರಂದು ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು ಸ್ಥಾಪಿಸಲಾಯಿತು.