Job Description: * ಮಾಜಿ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಹ್ಮಣ್ಯಂ ಅವರನ್ನು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಫೆ. 20 ರಂದು ಸೋಮವಾರ ನೇಮಕಗೊಂಡಿದ್ದಾರೆ. * ಬಿವಿಆರ್ ಸುಬ್ರಹ್ಮಣ್ಯಂ ರವರಿಗಿಂತ ಮುಂಚೆ ಇದ್ದ ನೀತಿ ಆಯೋಗದ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಯ್ಯರ್ ಅವರನ್ನು ಮೂರು ವರ್ಷಗಳ ಅವಧಿಗೆ ಅಮೆರಿಕದ ವಾಷಿಂಗ್ಟನ್ ಡಿಸಿಯ ವಿಶ್ವಬ್ಯಾಂಕ್ ಪ್ರಧಾನ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ.* ಸಚಿವ ಸಂಪುಟದ ನೇಮಕಾತಿ ಸಮಿತಿಯು ಸುಬ್ರಹ್ಮಣ್ಯಂ ನೇಮಕವನ್ನು ಹುದ್ದೆಯ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.* ಐಎಎಸ್‌ನ 1987ನೇ ಬ್ಯಾಚ್‌ನವರಾದ ಸುಬ್ರಹ್ಮಣ್ಯಂ ಅವರು ಸದ್ಯ ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಷನ್‌ನ (ಐಟಿಪಿಒ) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. 2022ರ ಸೆ.30ರಂದು ಸುಬ್ರಹ್ಮಣ್ಯಂ ಅವರು ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.