* ವಿಶ್ವ ಆರೋಗ್ಯ ಸಂಸ್ಥೆ ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿ ನಿಮ್ಹಾನ್ಸ್ ಗೆ 2024 ರ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ನಿಮ್ಹಾನ್ಸ್ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.  ನಿಮ್ಹಾನ್ಸ್ ನಿರ್ದೇಶಕಿ ಡಾ ಪ್ರತಿಮಾ ಮೂರ್ತಿ ಅವರು ಜಿನೀವಾದಲ್ಲಿ ಪ್ರಶಸ್ತಿ ಸ್ವೀಕರಿಸಿದರು.* ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು 2019 ರಲ್ಲಿ ಸ್ಥಾಪಿಸಿದೆ. ಈ ಪ್ರಶಸ್ತಿಯನ್ನು ವ್ಯಕ್ತಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ಆರೋಗ್ಯ ಮತ್ತು ವಿಶ್ವಾದ್ಯಂತ ಯೋಗಕ್ಷೇಮದ ಸುಧಾರಣೆಗೆ ಗಮನಾರ್ಹ ಕೊಡುಗೆ ನೀಡಿದ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಗೆ ನೀಡಲಾಗುತ್ತದೆ. * ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಈ ಪ್ರಶಸ್ತಿಗೆ ಭಾಜನವಾದ ನಿಮ್ಹಾನ್ಸ್‌ಗೆ ಅಭಿನಂದನೆಗಳನ್ನು ಸಲ್ಲಿಸಿದರು. ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಕೂಡ ನಿಮ್ಹಾನ್ಸ್ ಅನ್ನು ಅಭಿನಂದಿಸಿದರು. * ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ ಅವರು ನಮ್ಮ ಸಾಂಸ್ಥಿಕ ಪ್ರಯಾಣದ ಈ ಹಂತದಲ್ಲಿ ಆರೋಗ್ಯ ಪ್ರಚಾರಕ್ಕಾಗಿ ಪ್ರತಿಷ್ಠಿತ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಸ್ವೀಕರಿಸಲು ನಾವು ಹೆಮ್ಮೆಪಡುತ್ತೇವೆ ಎಂದು ಖುಷಿ ಹಂಚಿಕೊಂಡರು. ಅಲ್ಲದೇ ಇದು ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ನಮ್ಮ ಧ್ಯೇಯವನ್ನು ಮುಂದುವರಿಸುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಹೇಳಿದರು.