* ನಿವೃತ್ತ ಐಎಎಸ್ ಅಧಿಕಾರಿ, ನಟ ಹಾಗೂ ಬಿಜೆಪಿ ಮುಖಂಡರಾದ ಕೆ. ಶಿವರಾಂ (70) ಅವರು ಹೃದಯಾಘಾತದಿಂದ ಅಸ್ವಸ್ಥರಾಗಿ ಖಾಸಗಿ ಆಸ್ಪತ್ರೆಯಲ್ಲಿ ಫೆಬ್ರುವರಿ 29 ರಂದು ನಿಧನರಾಗಿದ್ದಾರೆ.* ಕೆ.ಶಿವರಾಮ್ ಅವರು 1972ರಲ್ಲಿ ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಟೈಪಿಂಗ್ ಮತ್ತು ಶೀಘ್ರ ಲಿಪಿ ಕೋರ್ಸ್ ಪೂರ್ಣಗೊಳಿಸಿದ್ದರು. ಮೇ 1973ರಲ್ಲಿ ಅಪರಾಧ ತನಿಖಾ ಇಲಾಖೆಯಲ್ಲಿ ಸರಕಾರಿ ಉದ್ಯೋಗ ಪಡೆದಿದ್ದ ಕೆ.ಶಿವರಾಮ್ ಅವರು ಸೇವೆಯಲ್ಲಿದ್ದಾಗಲೇ ತಮ್ಮ ಅಧ್ಯಯನ ಮುಂದುವರೆಸಿ 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಯ್ಕೆಯಾಗಿದ್ದರು.*1993 ರಲ್ಲಿ ಬಾನಲ್ಲೇ ಮಧುಚಂದ್ರಕ್ಕೆ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಬಂದಿದ್ದರು ಶಿವರಾಮ್. ಪ್ರಥಮ ಬಾರಿಗೆ ಕನ್ನಡದಲ್ಲಿ ಯುಪಿಎಸ್ ಸಿ ಪರೀಕ್ಷೆ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿದ್ದರು. ಶಿವರಾಮ್ ಅವರು ರಾಮನಗರ ಜಿಲ್ಲೆಯ ಬಿಡದಿಯ ಉರಗಳ್ಳಿಯಲ್ಲಿ 1953 ರಲ್ಲಿ ಜನಿಸಿದ್ದರು. ಬಾನಲ್ಲೇಮಧುಚಂದ್ರಕ್ಕೆ, ವಸಂತಕಾವ್ಯ, ಸಾಂಗ್ಲಿಯಾನ-3, ಪ್ರತಿಭಟನೆ , ಖಳನಾಯಕ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್, ನಾಗ, ಓ ಪ್ರೇಮ ದೇವತೆ, ಟೈಗರ್ ಚಿತ್ರಗಳಲ್ಲಿ ನಟಿಸಿದ್ದರು .