➤ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಪ್ರಮುಖಾಂಶಗಳು:
- ಸ್ವಾತಂತ್ರ್ಯ ಹೋರಾಟಗಾರ ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ 106ನೇ ಪುಣ್ಯಸ್ಮರಣೆಯ ಅಂಗವಾಗಿ (ಆಗಸ್ಟ್ 1, 2026) ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
- ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಸುನೇತ್ರಾ ಪವಾರ್ ಭಾಗವಹಿಸಿದ್ದರು.
- ಭಾರತದ ಭದ್ರತಾ ಕಾರ್ಯತಂತ್ರವನ್ನು ರೂಪಿಸುವಲ್ಲಿ ಮತ್ತು ದೇಶದ ಆಂತರಿಕ ಹಾಗೂ ಬಾಹ್ಯ ಭದ್ರತೆಯನ್ನು ದೃಢಗೊಳಿಸುವಲ್ಲಿ ಅಜಿತ್ ದೋವಲ್ ಅವರ ಪಾತ್ರವನ್ನು ಗುರುತಿಸಿ ಈ ಗೌರವ ನೀಡಲಾಗಿದೆ.
- ಸ್ಥಾಪನೆ: ಈ ಪ್ರಶಸ್ತಿಯನ್ನು 1983 ರಲ್ಲಿ ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್ ಸ್ಥಾಪಿಸಿತು.
- ಉದ್ದೇಶ: ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಅಸಾಧಾರಣ ಕೊಡುಗೆ ನೀಡಿದ ಗಣ್ಯರಿಗೆ ಪ್ರತಿವರ್ಷ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
- ಮೊದಲ ಪುರಸ್ಕೃತರು: ಸಮಾಜವಾದಿ ನಾಯಕ ಎಸ್. ಎಂ. ಜೋಶಿ (S M Joshi) ಈ ಪ್ರಶಸ್ತಿ ಪಡೆದ ಮೊದಲ ವ್ಯಕ್ತಿ.
- ಪ್ರಮುಖ ಪುರಸ್ಕೃತರು: ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ, ಡಾ. ಮನ್‌ಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ನಿತಿನ್ ಗಡ್ಕರಿ.