* 2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಲಿರುವ '15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದ ರಾಯಭಾರಿಯಾಗಿ (Brand Ambassador) ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ನೇಮಕ ಮಾಡಲಾಗಿದೆ.* ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ  2023-24ನೇ ಸಾಲಿನ ’15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ರಾಯಭಾರಿಯಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. * 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದೆ. ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನುಫೆಬ್ರವರಿ 29 ರಂದು (ಗುರುವಾರ) ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗದಲ್ಲಿ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಾರ್ಚ್‌ 7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.* ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತಿದೆ.* ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯು ಗುರುವಾರ ಫೆಬ್ರವರಿ 29ರಿಂದ ಆರಂಭವಾಗಲಿದೆ. 50 ದೇಶಗಳ ಸುಮಾರು 180 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. * ಅಮರಶಿಲ್ಪಿ ಜಕಣಾಚಾರಿ, ಬೆಳ್ಳಿಮೋಡ, ಒಂದಾನೊಂದು ಕಾಲದಲ್ಲಿ, ಅಂಥ, ಮಯೂರ, ತಾಯಿ ಸಾಹೇಬ, ಕಾಟೇರ, ಟಗರು ಪಲ್ಯ, ಕೌಶಲ್ಯ ಸುಪ್ರಜಾ ರಾಮಾ, ಸಪ್ತ ಸಾಗರದಾಚೆ ಎಲ್ಲೋ ಮುಂತಾದ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. * ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಜ್‌ ಕುಮಾರ್‌ ಕಲಾಭವನ, ಸುಚಿತ್ರಾ ಫಿಲ್ಮ್‌ ಸೊಸೈಟಿ ಬನಶಂಕರಿ, ಓರಿಯನ್‌ ಮಾಲ್‌, ಡಾ. ರಾಜ್‌ಕುಮಾರ್‌ ಭವನ ಮತ್ತು ಸುಚಿತ್ರ ಅಕಾಡೆಮಿಗಳಲ್ಲಿ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.