* ತಮಿಳು ನಟ ವಿಜಯ್ ದಳಪತಿ ಅವರು ಹೊಸ ಪಕ್ಷ ಘೋಷಿಸುವ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ (ತಮಿಳುನಾಡಿನ ವಿಕ್ಟರಿ ಪಾರ್ಟಿ ಎಂದು ಸರಳವಾಗಿ ಅನುವಾದಿಸಬಹುದು) ಎಂಬ ಪಕ್ಷವನ್ನು ಫೆಬ್ರುವರಿ 02 ರಂದು ಘೋಷಿಸಿದ್ದಾರೆ. * ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ಬಳಿಕ ಇಂದು ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ.* ರಾಜ್ಯದ ಎಲ್ಲ ಧರ್ಮೀಯರಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ತಮಿಳಗ ವೆಟ್ರಿ ಕಳಗಂ ಪಕ್ಷ ಶ್ರಮಿಸಲಿದೆ. 2026ರಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.* 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿ. ನಾವು 2024ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನಾವು ಯಾವುದೇ ಪಕ್ಷವನ್ನೂ ಬೆಂಬಲಿಸುವುದಿಲ್ಲ. ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ಈ ನಿರ್ಧಾರ ಮಾಡಿದ್ದೇವೆ" ಎಂದಿದ್ದಾರೆ.