* ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಮೇರು ನಟಿ ಶಬಾನಾ ಆಝ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ(ಮಾರ್ಚ್ 10) ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದರು.* ಶಬಾನಾ ಆಝ್ಮಿ ಅವರಿಗೆ ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. ಕವಿ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.* ಸರಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಆಝ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು.* ಸರಕಾರದ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲ, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.