* ಭಾರತದ ರಾಷ್ಟ್ರೀಯ ಶಿಕ್ಷಣ ದಿನವನ್ನು ಪ್ರತಿ ವರ್ಷ ನವೆಂಬರ್ 11 ರಂದು ಆಚರಿಸಲಾಗುತ್ತದೆ. 2025 ರ ರಾಷ್ಟ್ರೀಯ ಶಿಕ್ಷಣ ದಿನದ ಥೀಮ್ "ಒಳಗೊಂಡಿರುವ ಗುಣಮಟ್ಟದ ಶಿಕ್ಷಣ" ಎಂಬುವುದಾಗಿದೆ.* 15 ಆಗಸ್ಟ್ 1947 ರಿಂದ 2 ಫೆಬ್ರವರಿ 1958 ರವರೆಗೆ ಸೇವೆ ಸಲ್ಲಿಸಿದ ಸ್ವತಂತ್ರ ಭಾರತದ ಮೊದಲಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ನೆನಪಿಗಾಗಿ ಪ್ರತಿ ವರ್ಷ ಭಾರತದಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನು ನವೆಂಬರ್ 11 ರಂದು ಆಚರಿಸಲಾಗುತ್ತದೆ. * ಸೆಪ್ಟೆಂಬರ್ 2008 ರಲ್ಲಿ ಭಾರತ ಸರ್ಕಾರವು ರಾಷ್ಟ್ರದ ಶೈಕ್ಷಣಿಕ ವ್ಯವಸ್ಥೆಗೆ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಕೊಡುಗೆಗಳನ್ನು ಗೌರವಿಸಲು ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಘೋಷಿಸಿತು ಅಂದಿನಿಂದ ಪ್ರತಿ ವರ್ಷ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. * ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ನವೆಂಬರ್ 11, 1888 ರಲ್ಲಿ ಜನಿಸಿದರು. ಆಜಾದ್ ಒಬ್ಬ ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣತಜ್ಞ, ಪತ್ರಕರ್ತ ಮತ್ತು ಬರಹಗಾರರಾಗಿದ್ದರು. ಆಜಾದ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ. ಭಾರತವು ಸ್ವಾತಂತ್ರ್ಯವನ್ನು ಪಡೆದುಕೊಂಡ ನಂತರ, ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ನೇಮಕಗೊಂಡರು ಮತ್ತು ಇವರು ತಮ್ಮ ಅಧಿಕಾರವಧಿಯಲ್ಲಿ ದೇಶದ ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸುವಲ್ಲಿ ಮತ್ತು ಎಲ್ಲರಿಗೂ ಶಿಕ್ಷಣವನ್ನು ದೊರೆಯುವಂತೆ ಮಾಡುವಲ್ಲಿ ಗಮನಾರ್ಹವಾಗಿ ಕೊಡುಗೆಯನ್ನು ನೀಡಿದ್ದಾರೆ.