* ನವೆಂಬರ್‌ 14 ರಂದು ಭಾರತದಲ್ಲಿ ಮಕ್ಕಳ ದಿನವನ್ನು ಆಚರಿಸುವಂತೆ ಮಕ್ಕಳ ಶಿಕ್ಷಣ, ಹಕ್ಕುಗಳು ಮತ್ತು ಉತ್ತಮ ಭವಿಷ್ಯದ ಬಗ್ಗೆ ವಿಶ್ವದಾದ್ಯಂತ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ನವೆಂಬರ್ 20 ರಂದು ವಿಶ್ವ ಮಟ್ಟದಲ್ಲಿ ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.* ವಿಶ್ವ ಮಕ್ಕಳ ದಿನದ 2024 ರ ಥೀಮ್ " ಭವಿಷ್ಯವನ್ನು ಆಲಿಸು(Listen to the Future)" ಎಂಬುದು ಥೀಮ್ ಆಗಿದೆ.* 1990 ರಿಂದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ ಮಕ್ಕಳ ಹಕ್ಕುಗಳ ಘೋಷಣೆ ಮಾಡಿದ ಮತ್ತು ಮಕ್ಕಳ ಹಕ್ಕುಗಳ ಸಮಾವೇಶ ಈ ಎರಡನ್ನೂ ಅಂಗೀಕರಿಸಿದ ದಿನದ ನೆನಪಿಗಾಗಿ ನವೆಂಬರ್‌ 20 ರಂದೇ ವಿಶ್ವ ಮಕ್ಕಳ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.* ವಿಶ್ವ ಮಕ್ಕಳ ದಿನದ ಪರಿಕಲ್ಪನೆಯನ್ನು ಮೊದಲು 1925 ರಲ್ಲಿ ಇಂಟರ್‌ನ್ಯಾಷನಲ್‌ ಲೇಬರ್‌ ಆರ್ಗನೈಸೇಶನ್‌ (ILO) ಪ್ರಸ್ತಾಪಿಸಿತು.1954 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಮಕ್ಕಳ ಕಲ್ಯಾಣವನ್ನು ಉತ್ತೇಜಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಮಕ್ಕಳ ದಿನವನ್ನು ಆಚರಿಸುವ ನಿರ್ಣಯವನ್ನು ಅಂಗೀಕರಿಸಿತು.* ಮಕ್ಕಳ ದಿನಾಚರಣೆಯಂದು ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳು, ಬಾಲ ಕಾರ್ಮಿಕ ವ್ಯವಸ್ಥೆ, ಶಿಕ್ಷಣದ ಕೊರತೆಯಂತಹ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.