* ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್‌ ಸೈನಿ ಅಕ್ಟೋಬರ್ 17ರಂದು ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.* ಸೈನಿ ಅವರು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಐತಿಹಾಸಿಕ ಮೂರನೇ ಸತತ ಗೆಲುವಿನತ್ತ ಮುನ್ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ(PM Narendra Modi) ಈ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.* ಹರಿಯಾಣ ಸಿಎಂ ನಯಾಬ್‌ ಸಿಂಗ್ ಸೈನಿ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿ ಏಕಪಕ್ಷವಾಗಿ ಜಯ ಸಾಧಿಸಿದೆ.* 90 ಸದಸ್ಯ ಬಲದ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ 48 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 37, ಐಎನ್ಎಲ್ಡಿ 2 ಸ್ವತಂತ್ರ ಮೂವರು ಅಭ್ಯರ್ಥಿಗಳು ಗೆಲುವು ತಮ್ಮದಾಗಿಸಿಕೊಂಡಿದ್ದರು.* ಬಿಜೆಪಿ ಸರ್ಕಾರವಿದ್ದ ಹರಿಯಾಣದಲ್ಲಿ ಆಡಳಿತ ವಿರೋಧಿ ಅಲೆ ಉಂಟಾಗಿದ್ದು, ಈ ಬಾರಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗಿತ್ತು. ಆದರೆ ಮತದಾನೋತ್ತರ ಸಮೀಕ್ಷೆಗಳು ತಲೆಕೆಳಗಾದವು.