* ಕೇಪ್ಟೌನ್ನ ನ್ಯೂಲ್ಯಾಂಡ್ಸ್ನಲ್ಲಿ ಜನವರಿ 04 ರಂದು ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ ಭರ್ಜರಿ ಜಯ ಸಾಧಿಸಿದೆ. * ಟೆಸ್ಟ್ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ಸಮಯದಲ್ಲಿ ಮುಗಿದ ಈ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಸರಣಿ ಸೋಲು ತಪ್ಪಿಸಿಕೊಂಡಾಗ ರೋಹಿತ್ ಶರ್ಮ ಅವರ ತಂಡವು 1-1 ರಿಂದ ಸಮಬಲ ಸಾಧಿಸಿತು.* ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಎರಡನೇ ದಿನವೇ ಮುಕ್ತಾಯವಾದ 25 ನೇ ಪಂದ್ಯ ಇದಾಗಿದ್ದು, ನ್ಯೂಲ್ಯಾಂಡ್ಸ್‌ನಲ್ಲಿ ಜಸ್‌ಪ್ರೀತ್‌ ಬೂಮ್ರಾ ಪಡೆದ ವಿಕೆಟ್‌ಗಳು. ಇಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅವರಿಗೆ ಎರಡನೇ ಸ್ಥಾನ ಲಭಿಸಿದೆ. ಬೂಮ್ರಾ ಅವರು ಶೇನ್‌ ವಾರ್ನ್ (17) ದಾಖಲೆಯನ್ನು ಮೀರಿದರು.* ಮೊದಲ ಇನ್ನಿಂಗ್ಸ್ನಲ್ಲಿ 6 ವಿಕೆಟ್ ಪಡೆದು ಮೊಹಮ್ಮದ್ ಸಿರಾಜ್ ಮಿಂಚಿದ್ದರು. ಬಳಿಕ 2ನೇ ಇನ್ನಿಂಗ್ಸ್ನಲ್ಲಿ ಜಸ್ಪ್ರೀತ್ ಬುಮ್ರಾ ಮ್ಯಾಜಿಕ್ ನಡೆಸಿದರು. ಇದರೊಂದಿಗೆ ಸೌತ್ ಆಫ್ರಿಕಾ ವಿರುದ್ಧ ಟೆಸ್ಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಎನಿಸಿದರು.* ಅತಿ ಕಡಿಮೆ ಸಮಯದಲ್ಲಿ ಮುಗಿದ ಟೆಸ್ಟ್ ಗಳು - ದಕ್ಷಿಣ ಆಫ್ರಿಕಾ ಮತ್ತು ಭಾರತ 642 ಎಸೆತಗಳು - ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ 656 ಎಸೆತಗಳು - ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ 672 ಎಸೆತಗಳು - ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ 788 ಎಸೆತಗಳು - ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ 792 ಎಸೆತಗಳು