* ಪಾಕಿಸ್ತಾನ್ ದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ತಾಹ್ರಿಕ್ ಇ ಇನ್ಸಾಫ್ (ಪಿಟಿಐ) ಪಕ್ಷದ ನೂತನ ಅಧ್ಯಕ್ಷರಾಗಿ ಗೋಹರ್ ಖಾನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.* ತಾಹ್ರಿಕ್ ಇ ಇನ್ಸಾಫ್ (ಪಿಟಿಐ) ಪಕ್ಷದ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ಗೋಹರ್ ಅವರು ಪಾತ್ರರಾಗಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.* ಡಾ.ಯಾಸ್ಮಿನ್ ರಶೀದ್, ಅಲಿ ಅಮೀನ್ ಗಂದಾಪುರ ಮತ್ತು ಹಲೀಮ್ ಆದಿಲ್ ಶೇಖ್ ಅವರು ಕ್ರಮವಾಗಿ ಪಂಜಾಬ್, ಖೈಬರ್ ಪಂಖ್ತುಖಾವಾ ಮತ್ತು ಸಿಂಧ ಘಟಕದ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. * ಇಸ್ಲಾಮಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಿಟಿಐ ವಕ್ತಾರ ಮತ್ತು ಮುಖ್ಯ ಚುನಾವಣಾ ಆಯುಕ್ತ ರವೂಫ್ ಹಸನ್ ಅವರು ಅಧ್ಯಕ್ಷರಾಗಿ ಗೋಹರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು