* ಭಾರತವು ಈವರೆಗೆ 24 ಬೇಸಿಗೆ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿವೆ. ಈ ವೇಳೆ ಒಟ್ಟು 35 ಪದಕಗಳನ್ನು ಗೆದ್ದುಕೊಂಡಿದೆ. ಇದರಲ್ಲಿ 10 ಚಿನ್ನ, 9 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. * ಈ 10 ಚಿನ್ನದ ಪದಕಗಳಲ್ಲಿ 8 ಮೆಡಲ್ಗಳು ಹಾಕಿ ಆಟದಿಂದ ಬಂದಿರುವುದು ವಿಶೇಷ. ಅಂದರೆ ವೈಯುಕ್ತಿಕವಾಗಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿರುವುದು ಕೇವಲ ಇಬ್ಬರು ಸ್ಪರ್ಧಿಗಳು ಮಾತ್ರ.* 2008 ರ ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಅಭಿನವ್ ಬಿಂದ್ರಾ ಶೂಟಿಂಗ್ನಲ್ಲಿ ಭಾರತಕ್ಕೆ ಮೊದಲ ಬಂಗಾರದ ಪದಕ ತಂದುಕೊಟ್ಟಿದ್ದರು. ಇದಾದ ಬಳಿಕ 2020ರ ಟೋಕಿಯೋ ಒಲಿಂಪಿಕ್ಸ್ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಇದು ಅಥ್ಲೆಟಿಕ್ಸ್ನಲ್ಲಿ ಭಾರತಕ್ಕೆ ಸಿಕ್ಕ ಮೊದಲ ಪದಕ ಎಂಬುದು ವಿಶೇಷ.