* ಹಿರಿಯ ನಟ ಅನಂತ್ ನಾಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2025ರ ಪದ್ಮಭೂಷಣ ಪ್ರಶಸ್ತಿಯನ್ನು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಿದರು.* ದೇಶದ ತೃತೀಯ ನಾಗರಿಕ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣವನ್ನು ಸಿನಿ ಕ್ಷೇತ್ರದಲ್ಲಿ ಅವರು ಮಾಡಿರುವ ಮಹತ್ವಪೂರ್ಣ ಸಾಧನೆಗೆ ನೀಡಲಾಗಿದೆ.* ಅನಂತ್ ನಾಗ್ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಳ್ಳಿಯಲ್ಲಿ 1948ರ ಸೆಪ್ಟೆಂಬರ್ 4ರಂದು ಜನಿಸಿದರು.* 1973ರಲ್ಲಿ 'ಸಂಕಲ್ಪ' ಚಿತ್ರದಿಂದ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅವರು, ಅನೇಕ ಕಲಾತ್ಮಕ ಹಾಗೂ ಜನಪ್ರಿಯ ಸಿನಿಮಾಗಳಲ್ಲಿ ಭಿನ್ನ ರೀತಿಯ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ.* ಬಯಲು ದಾರಿ, ಕನ್ನೇಶ್ವರ ರಾಮ, ಚಂದನದ ಗೊಂಬೆ, ಗಂಧದ ಗುಡಿ, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕೆಜಿಎಫ್ ಅಧ್ಯಾಯ 1 ಮತ್ತು 2 ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅವರು ಮಿಂಚಿದ್ದಾರೆ. ಶ್ಯಾಮ್ ಬೆನಗಲ್ ಸೇರಿದಂತೆ ಹಲವಾರು ಖ್ಯಾತ ನಿರ್ದೇಶಕರೊಂದಿಗೆ ಕೆಲಸಮಾಡಿದ್ದಾರೆ.* ಪದ್ಮಪ್ರಶಸ್ತಿಗಳಲ್ಲಿ ಈ ವರ್ಷ 7 ಪದ್ಮವಿಭೂಷಣ, 19 ಪದ್ಮಭೂಷಣ, 113 ಪದ್ಮಶ್ರೀ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಅನಂತ್ ನಾಗ್ ಅವರು ಈ ಗೌರವವನ್ನು ಕನ್ನಡಿಗರಿಗೆ ಅರ್ಪಿಸಿದ್ದಾರೆ ಎಂದು ಹಳೆ ಸಂದರ್ಶನವೊಂದರಲ್ಲಿ ಹೇಳಿದ್ದರು.