* 2023-24ನೇ ಸಾಲಿನ ರಾಜ್ಯ 'ಸಂಗೀತ ವಿದ್ವಾನ್' ಪ್ರಶಸ್ತಿಗೆ ಬೆಂಗಳೂರಿನ 91 ವರ್ಷದ ಡಾ.ಪದ್ಮಮೂರ್ತಿ ಅವರು ಆಯ್ಕೆಯಾಗಿದ್ದಾರೆ.* ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಅಕ್ಟೋಬರ್ 15ರಂದು ಮೈಸೂರು ಅರಮನೆ ಮುಖ್ಯವೇದಿಕೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.* ಈ ಪ್ರಶಸ್ತಿ 5 ಲಕ್ಷ ರೂ. ಬಹುಮಾನ ಮೊತ್ತ ಮತ್ತು ಸರಸ್ವತಿ ವಿಗ್ರಹದ ಸ್ಮರಣಿಕೆ, ಫಲತಾಂಬೂಲ, ಶಾಲು ಮತ್ತು ಹಾರವನ್ನು ಒಳಗೊಂಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದ್ದಾರೆ.* ಸಾವಿರಾರು ಸಂಗೀತ ಕಚೇರಿ ನೀಡಿರುವ ಪದ್ಮಮೂರ್ತಿ ಅವರು 'ಕರ್ನಾಟಕ ಸಂಗೀತ ಲಕ್ಷಣ ಸಂಗ್ರಹ' ಎಂಬ ಎರಡು ಸಂಪುಟಗಳ ಕೃತಿ ಬರೆದಿದ್ದಾರೆ. ಅದರ ಜೊತೆಗೆ ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿಯ ಕಲಾಶ್ರೀ ಪ್ರಶಸ್ತಿವು ಅವರಿಗೆ ದೊರೆತಿದೆ.