* ಪದ್ಮಶ್ರೀ ಪುರಸ್ಕೃತ ಹಾಗೂ ‘ವನಜೀವಿ ರಾಮಯ್ಯ’ ಎಂಬ ಹೆಸರಿನಿಂದ ಪ್ರಸಿದ್ಧರಾದ ದಾರಿಪಳ್ಳಿ ರಾಮಯ್ಯ ಶನಿವಾರ(ಏಪ್ರಿಲ್ 12) ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.* 87 ವರ್ಷದ ರಾಮಯ್ಯ ಅವರು ಶುಕ್ರವಾರ ರಾತ್ರಿ ತಮ್ಮ ಗೃಹಪಟ್ಟಣವಾದ ದಾರಿಪಳ್ಳಿಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.* ಅಸಂಖ್ಯಾತ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ನೀಡಿದ ವಿಶಿಷ್ಟ ಕೊಡುಗೆಗೆ ಪ್ರಶಂಸಿಸಿ, 2017ರಲ್ಲಿ ಭಾರತ ಸರ್ಕಾರ ಇವರಿಗೆ ಪದ್ಮಶ್ರೀ ಪುರಸ್ಕಾರವನ್ನು ನೀಡಿತ್ತು.* ದಾರಿಪಳ್ಳಿ ರಾಮಯ್ಯ ಅವರ ನಿಧನಕ್ಕೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದು, ಈ ಘಟನೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ. ಅವರು ಯುವತಲೆಮಾರಿಗೆ ಪ್ರೇರಣೆಯಾಗಿದ್ದಾರೆ ಎಂದು ಸಿಎಂ ಹೇಳಿದರು.