* ಸಾಮಾಜಿಕ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. * 2025 ರ ವಿಶ್ವ ಸಾಮಾಜಿಕ ನ್ಯಾಯ ದಿನದ ಥೀಮ್ "ಸಬಲೀಕರಣ ಸೇರ್ಪಡೆ: ಸಾಮಾಜಿಕ ನ್ಯಾಯಕ್ಕಾಗಿ ಅಂತರಗಳನ್ನು ನಿವಾರಿಸುವುದು" ಎಂಬುವುದಾಗಿದೆ. * ಬಡತನ, ನಿರುದ್ಯೋಗ, ಸಾಮಾಜಿಕ ಉನ್ನತಿ, ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆಯಂಥ ಸಾಮಾಜಿಕ ನ್ಯಾಯದ ಸಮಸ್ಯೆಗಳನ್ನು ಗುರುತಿಸುವ ಅಗತ್ಯವನ್ನು ಅಂಗೀಕರಿಸುವುದು. ಸಾಮಾಜಿಕ ಏಕೀಕರಣ ಮತ್ತು ಉದ್ಯೋಗದ ಗುರಿಯನ್ನು ಸಾಧಿಸುವತ್ತ ಗಮನಹರಿಸುವುದು. ಸಾಮಾಜಿಕ ಜವಾಬ್ದಾರಿಗಳು, ನ್ಯಾಯ ಮತ್ತು ಬಡತನ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಲು ಜನರನ್ನು ಪ್ರೋತ್ಸಾಹಿಸುವುದಾಗಿದೆ.* ಜನರಲ್ ಅಸೆಂಬ್ಲಿ ತನ್ನ 63 ನೇ ಅಧಿವೇಶನದಲ್ಲಿ ನವೆಂಬರ್ 26, 2007 ರಂದು, ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿತು. ಅಂದಿನಿಂದ, ಪ್ರತಿ ವರ್ಷ ಫೆಬ್ರವರಿ 20 ನ್ನು ವಿಶ್ವದಾದ್ಯಂತ ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ 10ನೇ ಜೂನ್ 2008 ರಂದು ನ್ಯಾಯಯುತ ಜಾಗತೀಕರಣಕ್ಕಾಗಿ ಸಾಮಾಜಿಕ ನ್ಯಾಯ ಘೋಷಣೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು.