* ನಿರುದ್ಯೋಗಿ ಯುವಕರಿಗೆ ಉದ್ಯೋಗ ಹುಡುಕಲು ಸಹಾಯ ಮಾಡುವ ದೊಡ್ಡ ಉತ್ತೇಜನದ ಕ್ರಮವಾಗಿ ಕರ್ನಾಟಕ ಸರ್ಕಾರವು ಫೆಬ್ರುವರಿ.26 ಮತ್ತು 27 ರಂದು ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ. * ಯುವ ಸಮೃದ್ಧಿ ಸಮ್ಮೇಳನ ಎಂಬ ಹೆಸರಿನ ಈ ಮೇಳದಲ್ಲಿ 500ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸಲಿವೆ. ಈಗಾಗಲೇ 31,000 ಕ್ಕೂ ಉದ್ಯೋಗಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ.* ಎಂಜಿನಿಯರಿಂಗ್ ಡಿಪ್ಲೊಮಾ ಮತ್ತಿತರ ವೃತ್ತಿಪರ ಕೋರ್ಸ್ ಸೇರಿದಂತೆ ನಿರುದ್ಯೋಗಿ ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸುವ 'ಯುವ ಸಮೃದ್ಧಿ ಮೇಳ'ವನ್ನು ಫೆಬ್ರುವರಿ 26, 27ರಂದು ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.* ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೃಹತ್ ಉದ್ಯೋಗ ಮೇಳ ನಡೆಸಲಾಗಿತ್ತು. * ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಮತ್ತು ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಫೆಬ್ರುವರಿ 21 ರಂದು ಮಾಹಿತಿ ನೀಡಿದ್ದಾರೆ.* ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಉದ್ಯೋಗ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ.* "ಈಗಾಗಲೇ ಈ ಮೇಳಕ್ಕೆ ರಾಜ್ಯಾದ್ಯಂತ ಒಟ್ಟು 31 ಸಾವಿರ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ರಿಜಿಸ್ಟರ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಮೇಳ ಆರಂಭದ ದಿನವರೆಗೆ ನೋಂದಣಿಗೆ ಅವಕಾಶ ನೀಡಲಾಗಿದೆ.* ಉದ್ಯೋಗ ಮೇಳಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಬರುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲು ಮೆಜೆಸ್ಟಿಕ್ ರೈಲ್ವೆ ಹಾಗೂ ಬಸ್ ನಿಲ್ದಾಣಗಳಿಂದ ಮತ್ತು ಶಾಂತಿ ನಗರ ಬಸ್ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.* "ನಾವು ಉದ್ಯೋಗಗಳನ್ನು ಒದಗಿಸುವುದಲ್ಲದೆ ತರಬೇತಿ ಕೇಂದ್ರಗಳನ್ನು ತೆರೆಯುವ ಮೂಲಕ ಕೌಶಲ್ಯಗಳನ್ನು ನೀಡುತ್ತಿದ್ದೇವೆ ಮತ್ತು ಅವರನ್ನು ಪತ್ತೆಹಚ್ಚುವ ಮೂಲಕ ಇಲ್ಲಿ ನೋಂದಾಯಿಸಿದವರಿಗೆ ಉದ್ಯೋಗಗಳನ್ನು ಒದಗಿಸಲು ನಾವು ಪ್ರಯತ್ನಿಸುತ್ತೇವೆ" ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.